Actor Darshan: Actor Darshan’s ordeal today! The fate will be decided in the Supreme Court today!
Actor Darshan: ನಟ ದರ್ಶನ್‌ಗೆ ಇಂದು ಅಗ್ನಿಪರೀಕ್ಷೆ! ಇಂದು ಸುಪ್ರೀಂ ಕೋರ್ಟ್‌ನಲ್ಲಿ ಭವಿಷ್ಯ ನಿರ್ಧಾರ!
ಈಗ ಜಾಮೀನು ಅರ್ಜಿಯ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಸೇರಿ ಒಟ್ಟು ಏಳು ಮಂದಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ವಜಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ಇಂದು ಏಪ್ರಿಲ್ 02, 2025, ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದೆ.
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿರುವ ನಟ ದರ್ಶನ್‌ಗೆ ಜಾಮೀನು ಸಿಕ್ಕಿದೆ ಆದರೂ ಸಂಕಷ್ಟ ತಪ್ಪಿಲ್ಲ. ದರ್ಶನ್ ಮತ್ತು ಪವಿತ್ರಾ ಗೌಡ ಇನ್ನೂ ಕೆಲ ಆರೋಪಿಗಳಿಗೆ ಸಿಕ್ಕಿರುವ ಜಾಮೀನು ವಜಗೊಳಿಸುವಂತೆ ಬೆಂಗಳೂರು ಪೊಲೀಸ್ ಇಲಾಖೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ನೀಡಿತು. ಈಗ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಕೆಲವು ದಿನಗಳ ಹಿಂದೆ ಜಾಮೀನು ನೀಡಿತು. ಆದರೆ ಈಗ ಜಾಮೀನು ಅರ್ಜಿಯ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಮತ್ತು ಇನ್ನೂ ಏಳು ಮಂದಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ವಜಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ಇಂದು ಏಪ್ರಿಲ್ 02, 2025, ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದೆ.
ಈ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಮತ್ತು ಇನ್ನೂ ಐದು ಜನ ಆರೋಪಿಗಳ ಜಾಮೀನು ವಿಷಯವನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದೀವಾಲ ಮತ್ತು ಆರ್. ಮಹದೇವನ್ ಅವರ ಪೀಠವು ಪರಿಶೀಲಿಸಲಿದೆ.
ಜಾಮೀನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಮೊರೆ ಹೋದ ಬೆಂಗಳೂರು ಪೊಲೀಸ್!
ಬೆಂಗಳೂರು ಪೊಲೀಸ್ ಇಲಾಖೆ ಹೈಕೋರ್ಟ್ ಈಗಾಗಲೆ ನೀಡಿರಿವ ಜಾಮೀನು ತಡೆ ಬೇಕು, ನೀಡಬಾರದು ಎಂದು ಇದನ್ನು ತಡೆ ನೀಡುವಂತೆ ಸುಪ್ರೀಂಕೋರ್ಟ್‌ಗೆ ಪೋಲಿಸ್ ಇಲಾಖೆ ಮನವಿ ಸಲ್ಲಿಸಿತ್ತು. ಈ ಹಿಂದೆ ದರ್ಶನ್‌ಗೆ ಆರೋಗ್ಯ ಸರಿ ಇಲ್ಲದ ಕಾರಣಗಳಿಗಾಗಿ ಅಕ್ಟೋಬರ್ 30, 2024 ರಂದು ಹೈಕೋರ್ಟ್ ಆರು ವಾರಗಳವರೆಗೆ ಮಧ್ಯಂತರ ಜಾಮೀನು ನೀಡಲಾಗಿತ್ತು. ಆದರೆ, ಶಸ್ತ್ರಚಿಕಿತ್ಸೆಗಾಗಿ ಜಾಮೀನು ಪಡೆದಿದ್ದರೂ ದರ್ಶನ್ ಇಲ್ಲಿತನಕ ಯಾವುದೇ ಶಸ್ತ್ರಚಿಕಿತ್ಸೆ ಮಾಡಿಸಿಲ್ಲ ಎಂಬುದು ಗಮನಾರ್ಹ. ಡಿಸೆಂಬರ್ 13, 2024 ರಂದು ಹೈಕೋರ್ಟ್ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಗೆ ಶಾಶ್ವತ ಜಾಮೀನು ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.
ದರ್ಶನ್, ಪವಿತ್ರಾ ಗೌಡ, ರೇಣುಕಾಸ್ವಾಮಿ ಏನಿದು ಪ್ರಕರಣ?
ಪ್ರಕರಣದ ಹಿನ್ನೆಲೆ, ಚಿತ್ರದುರ್ಗದ 33 ವರ್ಷದ ರೇಣುಕಾಸ್ವಾಮಿ ಎಂಬಾತನನ್ನು ಜೂನ್ 8, 2024ರಂದು ಹತ್ಯೆ ಮಾಡಲಾಗಿತ್ತು. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂಬ ಕಾರಣಕ್ಕಾಗಿ ದರ್ಶನ್ ಗ್ಯಾಂಗ್ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕಿಡ್ನಾಪ್ ಮಾಡಿ, ಬೆಂಗಳೂರಿನ ಶೆಡ್‌ವೊಂದರಲ್ಲಿ ಮೂರು ದಿನಗಳ ಕಾಲ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಆರೋಪ ಇದೆ. ಜೂನ್ 9ರಂದು ರೇಣುಕಾಸ್ವಾಮಿಯ ಮೃತದೇಹ ಬೆಂಗಳೂರಿನ ಸುಮನಹಳ್ಳಿಯ ಒಳಚರಂಡಿಯಲ್ಲಿ ಪತ್ತೆಯಾಗಿತ್ತು.
ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ ಲೂಥ್ರಾ ರವರು ಸುಪ್ರೀಂಕೋರ್ಟ್‌ನಲ್ಲಿ ವಾದ ಮಂಡಿಸಲಿದ್ದಾರೆ. “ಈ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ನೀಡಿದ್ದು ಇದು ಸರಿಯಲ್ಲ, ಹೈಕೋರ್ಟ್ ಆದೇಶಿಸಿದ ಜಮೀನನ್ನು ರದ್ದುಗೊಳಿಸಬೇಕು” ಎಂದು ಸರ್ಕಾರದ ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 17 ಮಂದಿಯನ್ನು ಬಂಧಿಸಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ನಡೆಯಲಿರುವ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್ ಏನೆಲ್ಲಾ ತೀರ್ಮಾನ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ. ಇಂದು ಕೊಡುವ ತೀರ್ಪು ದರ್ಶನ್ ಮತ್ತು ಇನ್ನುಳಿದ ಆರೋಪಿಗಳ ಭವಿಷ್ಯವನ್ನು ನಿರ್ಧರಿಸಲಿದೆ. ಮತ್ತು ಈ ತೀರ್ಪು ಬಹು ಮುಖ್ಯ ಪಾತ್ರವಹಿಸಲಿದೆ.
10 ತಿಂಗಳ ನಂತರ ನಟ ದರ್ಶನ್ ಮತ್ತೆ ಸಿನಿಮಾ ಕೆಲಸದಲ್ಲಿ, ಅಂದರೆ ಚಿತ್ರೀಕರಣದಲ್ಲಿ, ಬ್ಯುಸಿ ಆಗಿದ್ದಾರೆ. ಬ್ಯಾಕ್ ಪೇನ್ ಇಂದ ಬಳಲುತ್ತಿರುವ ನಟ ದರ್ಶನ್, ಡೆವಿಲ್ ಸಿನಿಮಾದ ಸೆಕೆಂಡ್ ಸೆಡುಲ್ ಶ್ಯೂಟಿಂಗ್ ಮಾಡ್ತಿದ್ದಾರೆ. ಈಗಾಗಲೇ ಮೈಸೂರಿನಲ್ಲಿ ಕೆಲವು ದಿನಗಳ ಕಾಲ ಚಿತ್ರೀಕರಣ ನಡೆಯಿತು. ಮತ್ತೊಂದು ಕಡೆ, ನಟಿ ಪವಿತ್ರಾ ಗೌಡ ತಮ್ಮ ರೆಡ್ ಕಾರ್ಪೆಟ್ ಸ್ಟುಡಿಯೋ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ.