ಐಎಎಸ್ ಮತ್ತು ಕೆಎಎಸ್ ಪರೀಕ್ಷೆಗಳ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಲು ಇಂದಿನಿಂದ ಕಾಲಾವಕಾಶ ಇಲ್ಲಿದೆ ಸಂಪೂರ್ಣ ಮಾಹಿತಿ.
ಮೇ 8 ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೆಇಎ ಐಎಎಸ್ ಮತ್ತು ಕೆಎಎಸ್ ಪರೀಕ್ಷೆಗಳಿಗೆ ಪೂರ್ವ ತರಬೇತಿ ನೀಡಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿಕ್ಕೆ ವಿಶೇಷವಾದ ಪರೀಕ್ಷೆಯನ್ನು ನಡೆಸಲಿದೆ. ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಸಹಯೋಗದೊಂದಿಗೆ ಈ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಯಾರಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ?
ಕಲ್ಯಾಣ ಕರ್ನಾಟಕ ಪ್ರದೇಶದ ಪರಿಶಿಷ್ಟ ಜಾತಿ ಅಂದರೆ SC ಹಾಗೂ ಪರಿಶಿಷ್ಟ ಪಂಗಡ ಅಂದರೆ ST ಮತ್ತು ಇತರ ಹಿಂದುಳಿದ ವರ್ಗದ OBC ವಿದ್ಯಾರ್ಥಿಗಳು ಈ ತರಬೇತಿಯ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ಕರ್ನಾಟಕದ ಮೂಲ ನಿವಾಸಿಗಳು ಆಗಿರಬೇಕು.ಹಾಗೂ ಐಎಎಸ್, ಕೆಎಎಸ್ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವವರು ಆಗಿರಬೇಕು.
ಇದನ್ನು ಓದಿ: ಗೃಹಲಕ್ಷ್ಮಿ, ಇನ್ನೂ ಬಾಕಿ ಉಳಿದಿರುವ ಹಣ ಒಟ್ಟು ಆರು ಸಾವಿರ ರೂಪಾಯಿಗಳು ಈ ದಿನದಂದು ನಿಮ್ಮ ಖಾತೆಗೆ ಜಮಾ ಆಗಲಿದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹಾಗೂ ಮುಖ್ಯ ದಿನಾಂಕಗಳೇನು?
• ಮೇ 8 ರಂದು ಮಧ್ಯಾಹ್ನ 12 ಗಂಟೆಗೆ ಆನ್ಲೈನ್ ನಲ್ಲಿ ಅರ್ಜಿ ಪ್ರಾರಂಭವಾಗುತ್ತದೆ.
• ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮೇ 19 ಸಂಜೆ 5:00 ಗಂಟೆ ವರೆಗೆ ಇರುತ್ತದೆ.
• ಈ ಅರ್ಜಿಗೆ ಶುಲ್ಕ ಪಾವತಿಸುವ ಕೊನೆಯ ದಿನಾಂಕ ಮೇ 20 ಸಂಜೆ 5:00 ವರೆಗೆ.
ಅರ್ಜಿ ಸಲ್ಲಿಸುವ ಅಧಿಕೃತ ವೆಬ್ಸೈಟ್: ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇನ್ನು ಹೆಚ್ಚಿನ ಮಾಹಿತಿ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಶ್ರೀ ಎಚ್ ಪ್ರಸನ್ನ ಅವರು ಈ ಬಗ್ಗೆ ಪ್ರಕಟಣೆಯನ್ನು ನೀಡಿದ್ದಾರೆ. ಅರ್ಜಿ ಸಲ್ಲಿಸುವ ಸಮಯದಲ್ಲಿ ಅಭ್ಯರ್ಥಿಗಳು ಸರಿಯಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು ಹಾಗೂ ಶುಲ್ಕವನ್ನು ಸಮಯಕ್ಕೆ ಸರಿಯಾಗಿ ಪಾವತಿಸಬೇಕು ಎಂದು ತಿಳಿಸಿದ್ದಾರೆ. ಈ ತರಬೇತಿ ಕಾರ್ಯಕ್ರಮವು ಯು ಪಿ ಎಸ್ ಸಿ ಮತ್ತು ಕೆಪಿಎಸ್ಸಿ ಪರೀಕ್ಷೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಸಹಾಯಕವಾಗಿದೆ.
ಪ್ರತಿನಿತ್ಯ ಇದೇ ರೀತಿಯ ಉಪಯುಕ್ತ ಮಾಹಿತಿಯನ್ನು ಪಡೆದುಕೊಳ್ಳಲು ನಮ್ಮ ಕನ್ನಡ ಟ್ರೆಂಡಿಂಗ್ ವಾಟ್ಸಾಪ್ ಅನ್ನು ಸೇರಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.