ಎಸ್ ಎಸ್ ಟ್ರಸ್ಟ್ ಇಂದ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿಗೆ ಆಹ್ವಾನ.
ಡಾಕ್ಟರ್ ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ ಇಂದ ರಾಜ್ಯದ ಎಲ್ಲಾ ಜಿಲ್ಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ಆರ್ಥಿಕವಾಗಿ ನೆರವು ನೀಡಲು ವಿದ್ಯಾರ್ಥಿವೇತನವನ್ನು ಕೊಡಲು ಅರ್ಹತೆವುಳ್ಳ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಎಸ್ ಎಸ್ ಜನಕಲ್ಯಾಣ ಟ್ರಸ್ಟ್ ಇಂದ ವಿದ್ಯಾರ್ಥಿ ವೇತನವನ್ನು ಪಡೆಯಲು ಯಾರು ಯಾರು ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗಿರುತ್ತದೆ? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು ಯಾವುವು? ವಿದ್ಯಾರ್ಥಿಗಳು ತಮ್ಮ ಮೊಬೈಲ್ ನಲ್ಲಿ ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ವಿಧಾನ ಕುರಿತು ಸಂಪೂರ್ಣವಾಗಿ ಈ ಲೇಖನದಲ್ಲಿ ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.
ಸ್ನೇಹಿತರೆ, ಪ್ರತಿನಿತ್ಯ ಇದೇ ರೀತಿಯ ಉಪಯುಕ್ತ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ ಟ್ರೆಂಡಿಂಗ್ ವಾಟ್ಸಪ್ ಚಾನಲ್ ಅನ್ನು ಸೇರಿಕೊಳ್ಳಿ. ಸೇರಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.
ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ ಇದರ ಬಗ್ಗೆ ಮಾಹಿತಿ.
ಡಾಕ್ಟರ್ ಶಾಮನೂರು ಶಿವಶಂಕರಪ್ಪ ಕಲ್ಯಾಣ ಟ್ರಸ್ಟ್ 2012ರಲ್ಲಿ ಸ್ಥಾಪನೆಯಾದ ಇದು ಒಂದು ಸಾರ್ವಜನಿಕ ದತ್ತಿ ಸಂಸ್ಥೆಯಾಗಿದ್ದು, ಇದರ ಪ್ರಮುಖ ಗುರಿ ಶೈಕ್ಷಣಿಕವಾಗಿ ಪ್ರತಿಭಾವಂತರು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ಶಿಕ್ಷಣದ ಮೂಲಕ ಜೀವನವನ್ನು ಉನ್ನತಿ ಗೊಳಿಸುವುದು. ಕರ್ನಾಟಕದ ದಾವಣಗೆರೆಯನ್ನು ಕೇಂದ್ರವಾಗಿರಿಸಿಕೊಂಡು ಕಾರ್ಯನಿರ್ವಹಿಸುತ್ತಿರುವ ಟ್ರಸ್ಟ್ ಇದಾಗಿದೆ. ಈ ಟ್ರಸ್ಟ್ ಶಿಕ್ಷಣ, ಆರೋಗ್ಯ ಮತ್ತು ಗ್ರಾಮೀಣ ಅಭಿವೃದ್ಧಿಗಳಂತಹ ಚಿತ್ರಗಳಲ್ಲಿ ಜಾತಿ, ಕುಲ, ಧರ್ಮ ಯಾವುದೇ ಭೇದವಿಲ್ಲದೆ ಸೇವೆ ಸಲ್ಲಿಸುತ್ತಿದೆ.
ಇದನ್ನು ಓದಿ: 2025 ಮುದ್ರಲೋನ್ ಯೋಜನೆ – ಸ್ವಯಂ ಉದ್ಯೋಗಕ್ಕೆ ಹೊಸ ಅಸ್ತ್ರ
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು?
• ಈ ವಿದ್ಯಾರ್ಥಿ ವೇತನವನ್ನು ಕರ್ನಾಟಕದಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಕೊಡಲಾಗುತ್ತದೆ.
• ವಿದ್ಯಾರ್ಥಿಯು ಕರ್ನಾಟಕದ ಪ್ರತಿಷ್ಠಿತ ಕಾಲೇಜಿನಲ್ಲಿ ವಿಶ್ವವಿದ್ಯಾಲಯ ಅಥವಾ ಬೋರ್ಡ್ ಇಂದ ಮಾನ್ಯತೆ ಪಡೆದ ಕೋರ್ಸ್ ಗಳಲ್ಲಿ ಪೂರ್ಣ ಪ್ರಮಾಣದ ಅವಧಿಯಲ್ಲಿ ಅಭ್ಯಾಸ ಮಾಡುತ್ತಿರಬೇಕು.
• ವಿದ್ಯಾರ್ಥಿ ಪೋಷಕರ ಕುಟುಂಬದ ಒಟ್ಟು ವಾರ್ಷಿಕ ಆದಾಯ ಒಂದು ಲಕ್ಷ ರೂಪಾಯಿಯ ಒಳಗಡೆ ಹೊಂದಿರಬೇಕು.
• ವಿದ್ಯಾರ್ಥಿಯು ಕೋರ್ಬ್ಯಾಂಕಿಂಗ್ ಸೌಲಭ್ಯವಿರುವ ಯಾವುದಾದರೂ ಬ್ಯಾಂಕಿನಲ್ಲಿ ತಮ್ಮ ಬ್ಯಾಂಕ್ ಅಕೌಂಟ್ ಓಪನ್ ಮಾಡಿಸಿಕೊಂಡಿರಬೇಕು.
• ಅರೆಕಾಲಿಕ ಕೋರ್ಸ್ ಓದುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುವುದಿಲ್ಲ.
• ಶೇಕಡವಾರು ಅಂಕಗಳಿಗೆ ಸಂಬಂಧಿಸಿದಂತೆ ವಿವಿಧ ಕೋರ್ಸ್‌ಗಳ ಗಳ ಮಾಹಿತಿಯು ಈ ಕೆಳಗಿನಂತೆ ಇರಬೇಕು.
• ವಿದ್ಯಾರ್ಥಿಯು ಸಲ್ಲಿಸಿದ ಅರ್ಜಿಯನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಿ ಆರ್ಥಿಕವಾಗಿ ಹಿಂದುಳಿದ ಹಾಗೂ ಪ್ರತಿಭಾನ್ವಿತ ಹಾಯ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿವೇತನವನ್ನು ನೀಡುವುದು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ: ತೋಟದಲ್ಲಿ ವ್ಯವಸಾಯ ಕೆಲಸ ಮಾಡಲು ದಂಪತಿಗಳು ಬೇಕಾಗಿದ್ದಾರೆ.
ಯಾವ ಯಾವ ವಿದ್ಯಾರ್ಥಿಗಳು ಈ ಸ್ಕಾಲರ್ ಶಿಪ್ಪಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ?
ಪಿಯುಸಿ, ಎಂ ಬಿ ಬಿ ಎಸ್, ಡಿಪ್ಲೋಮಾ, BCOM, ಬಿ ಎಸ್ ಸಿ, BE, BVSC, BCA, BBM/BBA, B-PHARMA, MA, BA, MSC, M.COM, B.Ed.
ಇಂಥ ತರಗತಿಗಳಿಗೆ ಪ್ರವೇಶ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳೇನು?
ಎಸ್ ಎಸ್ ಜನ ಕಲ್ಯಾಣ ಟ್ರಸ್ಟ್ ಇಂದ ವಿದ್ಯಾರ್ಥಿ ವೇತನವನ್ನು ಪಡೆಯಲು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಗಳು ಈ ಕೆಳಗೆ ಕೊಡಲಾಗಿರುವ ದಾಖಲೆಗಳನ್ನು ಕಡ್ಡಾಯವಾಗಿ ಒದಗಿಸತಕ್ಕದ್ದು.
• ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಮುದ್ರಿಸಿದ ಪ್ರತಿಯ ಸಹಿ ಮಾಡಿಸಿ ಕ್ಯಾನ್ ಮಾಡಿದ ಪ್ರತಿ.
• ವಿದ್ಯಾರ್ಥಿಯ ಆಧಾರ್ ಕಾರ್ಡ್ ಜೆರಾಕ್ಸ್.
• ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯದ ಜೆರಾಕ್ಸ್ ಅಂದರೆ ಇನ್ಕಮ್ ಸರ್ಟಿಫಿಕೇಟ್.
• ವಿದ್ಯಾರ್ಥಿಯ ಎಸ್ ಎಸ್ ಎಲ್ ಸಿ ಹತ್ತನೇ ತರಗತಿಯ ಮಾರ್ಕಸ್ ಕಾರ್ಡ್ ಜೆರಾಕ್ಸ್.
• ದ್ವಿತೀಯ ಪಿಯುಸಿ, 12ನೇ ತರಗತಿಯ ಅಂಕಪಟ್ಟಿಯ ಜೆರಾಕ್ಸ್.
• ವಿದ್ಯಾಸಂಸ್ಥೆ ಅಥವಾ ಕಾಲೇಜಿನಲ್ಲಿ ದಾಖಲಾತಿ ಅಥವಾ ಪ್ರವೇಶ ಪಡೆದು ಹಣ ಕಟ್ಟಿರುವ ರಶೀದಿಯ ಜೆರಾಕ್ಸ್.
• ವಿದ್ಯಾರ್ಥಿಯ ಪಾಸ್ಪೋರ್ಟ್ ಸೈಜ್ ಫೋಟೋ ಇರುವ ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಐ ಎಫ್ ಎಸ್ ಸಿ ಕೋಡ್ ತೋರಿಸುವ ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್.
ಇದನ್ನು ಓದಿ: ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಎಚ್ ಡಿ ಎಫ್ ಸಿ ಬ್ಯಾಂಕ್ನಿಂದ ಬಂಪರ್ ಸ್ಕಾಲರ್ಶಿಪ್.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹತೆಯುಳ್ಳ ವಿದ್ಯಾರ್ಥಿಗಳು ಈ ಕೆಳಗಿನ ವಿಧಾನವನ್ನು ಅನುಸರಿಸಿ, ಮನೆಯಲ್ಲಿಯೇ ಮೊಬೈಲ್ ಮೂಲಕ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಡೆ ಅರ್ಜಿಯನ್ನು ಸಲ್ಲಿಸಬಹುದು.
• ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಿ ಅಪ್ಲೈ ನೋ ಮೇಲೆ ಕ್ಲಿಕ್ ಮಾಡಿ ಅಧಿಕೃತ ಎಸ್ ಎಸ್ ಜನಕಲ್ಯಾಣ ಟ್ರಸ್ಟ್ ನ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಿ.
• ಅಧಿಕೃತ ಯಿಬ್ರೋಹಿ ವೆಬ್ಸೈಟ್ ಅನ್ನು ಪ್ರವೇಶ ಮಾಡಿದ ನಂತರ ಇಲ್ಲಿ ಮುಖಪುಟದಲ್ಲಿ ಕಾಣಿಸುವ ಅಪ್ಲೈ ಆನ್ಲೈನ್ ಅನ್ನು ಆಯ್ಕೆ ಮಾಡಿ, ಅದರ ಮೇಲೆ ಕ್ಲಿಕ್ ಮಾಡಿ, ಕ್ಲಿಕ್ ಹಿಯರ್ ಟು ಅಪ್ಲೈ ಬಟನ್ ಮೇಲೆ ಕ್ಲಿಕ್ ಮಾಡಿ. ಮೊದಲ ಬಾರಿಗೆ ಈ ವೆಬ್ಸೈಟ್ ಉಪಯೋಗ ಉಪಯೋಗಿಸುತ್ತಿರುವ ವಿದ್ಯಾರ್ಥಿಗಳು ಬಟನ್ ಮೇಲೆ ಕ್ಲಿಕ್ ಮಾಡಿ, ಬಳಕೆದಾರರ ಐಡಿ ಹಾಗೂ ಪಾಸ್ವರ್ಡ್ ಅನ್ನು ರಚನೆ ಮಾಡಿಕೊಂಡು ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ, ಲಾಗಿನ್ ಮಾಡಿಕೊಳ್ಳಿ.
• ಆ ಬಳಿಕ ಇಲ್ಲಿ ಅರ್ಜಿ ನಮೂನೆ ತೆರೆದುಕೊಳ್ಳುತ್ತಿದೆ. ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರ ಹಾಗೂ ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯ ಕೊನೆಯದಾಗಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಪೂರ್ಣಗೊಳಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ,
31-07-2025,
ಹೆಚ್ಚಿನ ಮಾಹಿತಿಗಾಗಿ:-
• ಅಧಿಕೃತ ವೆಬ್ಸೈಟ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ.
• ಅಧಿಕೃತ ಪ್ರಕಟಣೆ ಕೈಪಿಡಿ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.
• ಕಚೇರಿಯ ವಿಳಾಸ: ಡಾಕ್ಟರ್ ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್, c/o R L law ಕಾಲೇಜೆ, ಎ ವಿ ಕೆ ಕಾಲೇಜ್ ರೋಡ್, ಬಿಹೈಂಡ್ ಬಾಪೂಜಿ ಎಜುಕೇಶನಲ್ ಅಸೋಸಿಯೇಷನ್ ಬಿಇಎ ಆಫೀಸ್ ದಾವಣಗೆರೆ- 577002 ಕರ್ನಾಟಕ.
ಸ್ನೇಹಿತರೆ, ಪ್ರತಿನಿತ್ಯ ಇದೇ ರೀತಿಯ ಉಪಯುಕ್ತ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ ಟ್ರೆಂಡಿಂಗ್ ವಾಟ್ಸಪ್ ಚಾನಲ್ ಅನ್ನು ಸೇರಿಕೊಳ್ಳಿ. ಸೇರಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.