ಸೋನು ನಿಗಮ್ಗೆ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಖಡಕ್ ಎಚ್ಚರಿಕೆ,
ಕರ್ನಾಟಕದ ಜನತೆಗೆ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಹಿನ್ನೆಲೆ, ಗಾಯಕ ಸೋನು ನಿಗಮ್ ಅವರು ಕರ್ನಾಟಕದ ಜನತೆಗೆ ಕ್ಷಮೆ ಕೇಳಿದ್ದಾರೆ.
ಬೆಂಗಳೂರು: ಬಾಲಿವುಡ್ ನ ಹಿನ್ನೆಲೆ ಗಾಯಕ ಸೋನು ನಿಗಮ್ ಇವರ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಠಿಣ ಕ್ರಮ ತೆಗೆದುಕೊಂಡಿದೆ. ಕನ್ನಡ ಚಿತ್ರರಂಗದ ಇನ್ನುಮುಂದೆ ಬರುವ ಕಾರ್ಯಕ್ರಮಗಳಿಂದ ಇವರನ್ನು ದೂರ ಇಟ್ಟಿದೆ. ಅಷ್ಟೇ ಅಲ್ಲದೆ, ಗಾಯಕ ಸೋನು ನಿಗಮ್ ನನ್ನು ಕಪ್ಪು ಪಟ್ಟಿಗೆ ಸೇರಿಸುವ ನಿರ್ಧಾರ ಮಾಡಿದೆ.
ಚಲನಚಿತ್ರ ವಾಣಿಜ್ಯ ಮಂಡಳಿಯ ಎಚ್ಚರಿಕೆಯ ಬೆನ್ನಲ್ಲೇ ಗಾಯಕ ಸೋನು ನಿಗಮ್ ಎಚ್ಚೆತ್ತುಕೊಂಡು, ಕರ್ನಾಟಕಕ್ಕೆ ಕ್ಷಮೆಯಾಚಿಸಿದ್ದಾರೆ. ”ಕ್ಷಮೆ ಇರಲಿ ಕರ್ನಾಟಕ, ನನ್ನಲ್ಲಿರುವ ಅಹಂಕಾರಕ್ಕಿಂತ ನಿಮ್ಮ ಪ್ರೀತಿಯೇ ದೊಡ್ಡದು. ನಿಮ್ಮನ್ನು ಯಾವತ್ತಿಗೂ ಪ್ರೀತಿಸುತ್ತೆನೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಕೊಂಡಿದ್ದಾರೆ.
ಏಪ್ರಿಲ್ 25 ಮತ್ತು 26 ರಂದು ಬೆಂಗಳೂರಿನ ಖಾಸಗಿ ಕಾಲೇಜಿನ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡಿಗರನ್ನು ಕೆರಳಿಸುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಅದಾದ ನಂತರ ಕನ್ನಡ ಸಂಘಟನೆಗಳು ಮತ್ತು ಕನ್ನಡಿಗರಿಂದ ಸೋನು ನಿಗಮ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂಬ ಆಗ್ರಹ ಕೇಳಿಬಂದಿತ್ತು.
ಸೋನು ನಿಗಮ್ ನೀಡಿದ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಸೋನು ನಿಗಮ್ ಅವರ ವಿರುದ್ಧ ಪ್ರಕರಣ ಕೂಡ ದಾಖಲಾಗಿತ್ತು. ಈ ಸಂಬಂಧ ಅವರಿಗೆ ಪೊಲೀಸರು ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿದ್ದಾರೆ.
ಏಪ್ರಿಲ್ 22 ರಂದು ನಡೆದ ಉಗ್ರರ ದಾಳಿಗೆ ಕನ್ನಡ ಭಾಷೆಯ ಕುರಿತಾದ ವಿಷಯ ಎಳೆದು ತಂದಿದ್ದು ವಿವಾದಕ್ಕೆ ದಾರಿ ಮಾಡಿಕೊಟ್ಟಿತು.
ಕನ್ನಡಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಅಡಿಯಲ್ಲಿ ಗಾಯಕ ಸೋನು ನಿಗಮ್ ಅವರಿಗೆ ನೋಟಿಸ್ ಕೊಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ. ಕೆ. ಬಾಬಾ ಸೋಮವಾರ ತಿಳಿಸಿದರು.
ಇದನ್ನು ಓದಿ: ಬರೋಬ್ಬರಿ ಒಂಬತ್ತು ಸಾವಿರ ರೂಪಾಯಿ ಪ್ರತಿ ತಿಂಗಳು ಸಿಗುವ ಪೋಸ್ಟ್ ಆಫೀಸ್ನ ಹೊಸ ಸ್ಕೀಮ್
ಕನ್ನಡ ಭಾಷೆ ಹಾಗೂ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿರುವುದರಿಂದ ಸೋನು ನಿಗಮ್ ಅವರ ವಿರುದ್ಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಕನ್ನಡ ಹಾಡು ಹಾಡುವಂತೆ ಕೇಳಿರುವುದಕ್ಕೂ ಅವರ ಪ್ರತಿಕ್ರಿಯೆಗೂ ಸಂಬಂಧವಿಲ್ಲ. ಮುಂದಿನ ವಾರ ವಿಚಾರಣೆಗೆ ಹಾಜರಾಗುವಂತೆ ಸೋನು ನಿಗಮ್ ಅವರಿಗೆ ನೋಟಿಸ್ ನೀಡಿದ್ದೇವೆ ಮತ್ತು ಕಾರ್ಯಕ್ರಮ ಆಯೋಜಕರನ್ನೂ ಕರೆದು ಮಾಹಿತಿ ಪಡೆಯುತ್ತೇವೆ ಎಂದು ಅವರು ತಿಳಿಸಿದರು.
ಸೋನು ನಿಗಮ್ ಕನ್ನಡದ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಮೇ 3 ರಂದು ಎಫ್ಐಆರ್ ದಾಖಲಾಗಿತ್ತು.
ಕರ್ನಾಟಕ ರಕ್ಷಣಾ ವೇದಿಕೆ ನಗರ ಘಟಕದಲ್ಲಿ ಅಧ್ಯಕ್ಷ ಧರ್ಮರಾಜು ಎಂಬುವವರು ನೀಡಿದ ದೂರಿನ ಮೇರೆಗೆ ಗಾಯಕ ಸೋನು ನಿಗಮ್ ಅವರ ವಿರುದ್ಧ ಭಾರತೀಯ ನ್ಯಾಯಸಂಹಿತೆ (ಬಿಎನ್ಎಸ್) 351(1) ಇತರ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವುದು, 353 ನಡಿ ಧಾರ್ಮಿಕ ಅಥವಾ ಭಾಷಿಕ ಭಾವನೆಗಳ ಮೇಲೆ ದ್ವೇಷ ಸೇರಿದಂತೆ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು.
ಏಪ್ರಿಲ್ 25 ಮತ್ತು 26ರಂದು ಮ್ಯೂಸಿಕ್ ಈವೆಂಟ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸೋನು ನಿಗಮ್ ಅವರು ಆಕ್ಷೇಪಾರ್ಹ ಮತ್ತು ಭಾವನಾತ್ಮಕವಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಎಫ್ಐಆರ್ನಲ್ಲಿ ದೂರುದಾರರು ಉಲ್ಲೇಖ ಮಾಡಿದ್ದಾರೆ.
ಇದೇ ತರಹದ ಉಪಯುಕ್ತ ಮಾಹಿತಿ ಪಡೆಯಲು ನಮ್ಮ ಕನ್ನಡ ಟ್ರೆಂಡಿಂಗ್ ವಾಟ್ಸಪ್ ಚಾನಲ್ ಅನ್ನು ಸೇರಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.